ವಿಜಯಪುರ : ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್. ಅದು ಸತ್ಯವೋ ಅಸತ್ಯವೋ ಅನ್ನೋದರ ಬಗ್ಗೆ ಸೂಕ್ತ ತನಿಖೆಯಾಗಲಿ. ಈ ಬಗ್ಗೆ ಸೂಕ್ತ ತನಿಖೆ ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ನಮಗೂ ಇದಕ್ಕೂ ಸಂಬಂಧ ಇಲ್ಲ ಹೀಗಾಗಿ ಪ್ರತಿಕ್ರಿಯೆ ನೀಡಲ್ಲ ಎಂದರು.
ಬಿಜೆಪಿ ಆರ್ ಎಸ್ ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್, ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಇರುತ್ತೆ. ಬೆಂಕಿ ಪಟ್ಟಣ ಇಟ್ಟುಕೊಂಡು ಬಿಜೆಪಿಯವರು ಓಡಾಡುತ್ತಿದ್ದಾರೆ. ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡ್ತಾರೆ. ಬಿಜೆಪಿಯವರು ದೇಶಕ್ಕಾಗಿ ಯಾವುದೇ ಹೋರಾಟ ಮಾಡಿಲ್ಲ ಎಂದರು.
ಇಂಡಿಯಾ ಗೇಟ್ ನಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರ ಹೆಸರಿದೆ. ಹೋರಾಟ ಮಾಡಿದ ಮುಸ್ಲೀಮರ ನೂರಾರು ಹೆಸರಿದೆ. ಬಿಜೆಪಿಯವರು ಬ್ರಿಟೀಷರ ಏಜೆಂಟ್ ಆಗಿದ್ದರು. ಈಗ ಬಿಜೆಪಿಯವರು ರಾಷ್ಟ್ರೀಯತೆ ಅನ್ನುತ್ತಿದ್ದಾರೆ. ವಿಷಕಾರಿ ನಿರ್ಮೂಲನೆ ಮಾಡಿ ಎಂಬರ್ಥದಲ್ಲಿ ಖರ್ಗೆ ಹೇಳಿದ್ದಾರೆ. ಇದನ್ನು ಹೊಡೆದು ಕೊಲ್ಲಿ ಎಂದು ಹೇಳಿಲ್ಲ ಎಂದು ಎಂ.ಬಿ ಪಾಟೀಲ್ ಸ್ಪಷ್ಟಪಡಿಸಿದರು.



