Thursday, April 9, 2026
Google search engine

Homeರಾಜ್ಯ6,32,200 ವಿದ್ಯಾರ್ಥಿಗಳಲ್ಲಿ 5,46,698 ಉತ್ತೀರ್ಣ : ಹರ್ಷ ವ್ಯಕ್ತಪಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

6,32,200 ವಿದ್ಯಾರ್ಥಿಗಳಲ್ಲಿ 5,46,698 ಉತ್ತೀರ್ಣ : ಹರ್ಷ ವ್ಯಕ್ತಪಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ ಶೇ.86.48 ಫಲಿತಾಂಶ ಬಂದಿದೆ. ಇದು ಐತಿಹಾಸಿಕ ದಿನ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 

ಕಲಾ ವಿಭಾಗದಲ್ಲಿ 98,310 (72.86%) ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,82,317(88.04%) ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,66,071( 86.48%) ಉತ್ತೀರ್ಣರಾಗಿದ್ದಾರೆ. ಈ ಪೈಕಿ ನಗರ ವಿಭಾಗದಲ್ಲಿ 3,71,853 (85.95%) ಮಕ್ಕಳು, ಗ್ರಾಮೀಣ ವಿಭಾಗದ 1,74,845 (87.62%) ಮಕ್ಕಳು ಉತ್ತೀರ್ಣರಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ 1,70,529 ಮಕ್ಕಳು, ಪ್ರಥಮ ದರ್ಜೆಯಲ್ಲಿ 2,95,385 ಮಕ್ಕಳು, ದ್ವೀತಿಯ ದರ್ಜೆಯಲ್ಲಿ 63,957 ಮಕ್ಕಳು ಉತ್ತೀರ್ಣರಾಗಿದ್ದು, 16,827 ಮಕ್ಕಳು ಜಸ್ಟ್‌ ಪಾಸ್‌ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ 5,577 ವಿದ್ಯಾರ್ಥಿಗಳು 35% ನಿಂದ 33% ಪಾಸಿಂಗ್ ಅಂಕದಿಂದ ಪಾಸ್ ಆಗಿದ್ದಾರೆ. ಮಕ್ಕಳಿಗೆ ಫಲಿತಾಂಶ ಮೊದಲು ಕೊಡಬೇಕು ಅಂತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಮಾಡಿದ್ದೇವೆ. ಅಂಕಪಟ್ಟಿ ಕೂಡ ಇಂದೇ ಲಭ್ಯವಾಗಿದೆ. ಡಿಜಿ ಲಾಕರ್‌ನಲ್ಲೂ ಅಂಕಪಟ್ಟಿ ಸಿಗಲಿದೆ. ರಾಜ್ಯದಲ್ಲಿ ಫಸ್ಟ್‌ ಟೈಮ್‌ 86.48% ಫಲಿತಾಂಶ ಬಂದಿದ್ದು, ಮೊದಲು ಮಕ್ಕಳಿಗೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ. 

RELATED ARTICLES
- Advertisment -
Google search engine

Most Popular