ರಾಮನಗರ: ಬೈಕಿಗೆ ನಗರಸಭೆ ಆಯುಕ್ತರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಗರಸಭೆ ಆಯುಕ್ತ ನಾಗೇಶ್ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಕುಳಿತಿದ್ದ ಸಿದ್ದಿಕ್ ಅಂಜುಮ್(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ರಾಮನಗರ ಸಂಚಾರಿ ಪೊಲೀಸರು ನಗರಸಭೆ ಆಯುಕ್ತರ ಕಾರನ್ನು ವಶಕ್ಕೆ ಪಡೆದಿದ್ದಾರೆ.