ಗದಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹ ಜ್ಯೋತಿ ಯೋಜನೆಗೆ ನಗರದ ಪಂ. ಭಿಮಸೇನ್ ಜೋಷಿ ರಂಗಮಂದಿರದಲ್ಲಿ ಚಾಲನೆ ನೀಡಲಾಯಿತು.
ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರು ಜ್ಯೋತಿ ಬೆಳಗಿಸಿದರು. ನಂತರ ಮಾದರಿ ಮನೆಯ ಲೈಟ್ ಬಟನ್ ಒತ್ತಿ ಲೈಟ್ ಆನ್ ಮಾಡುವ ಮೂಲಕ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ ಆರ್ ಪಾಟೀಲ್, ಜಿ ಎಸ್ ಗಡ್ಡದೇವರಮಠ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಎಸ್ಪಿ ಬಿ ಎಸ್ ನೇಮಗೌಡ, ಹೆಸ್ಕಾಂ ಎಂಡಿ ಮೊಹಮ್ಮದ್ ರೋಶನ್, ಹೆಸ್ಕಾಂ ಅಧಿಕಾರಿಗಳು, ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.