ಮಂಗಳೂರು(ದಕ್ಷಿಣ ಕನ್ನಡ): ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ನ್ಯಾಯ ಕೇಳಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಿಂತಿಕಲ್ಲಿನಿಂದ ಆರಂಭಗೊಂಡ ವಾಹನ ಜಾಥಾ ಸುಳ್ಯ ನಗರ ಪ್ರವೇಶಿಸಿ ಜ್ಯೋತಿ ಸರ್ಕಲ್ ಬಳಿಯಿಂದ ಹೋರಾಟಗಾರ ಮಹೇಶ್ ತಿಮರೋಡಿ ನೇತೃತ್ವದಲ್ಲಿ ಸಾವಿರಾರು ಜನರು ನಗರದಲ್ಲಿ ಪಾದಯಾತ್ರೆ ಮೂಲಕ ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಸೌಜನ್ಯಾ ತಾಯಿ ಕುಸುಮಾವತಿ, ತಂದೆ ಚಂದಪ್ಪ ಗೌಡ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್, ಹೋರಾಟ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಡಿ.ಬಿ.ಬಾಲಕೃಷ್ಣ, ಸುಳ್ಯ ಗೌಡ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಗಿರೀಶ್ ಮಟ್ಟನವರ್ ಸೇರಿದಂತೆ ಸಾವಿರಾರು ಮಂದಿ ಭಾಗಿಯಾಗಿದ್ದರು.
