Friday, April 24, 2026
Google search engine

Homeಸ್ಥಳೀಯಡಾ. ರಾಜ್ ಕುಮಾರ್ ಜೀವನ ಮೌಲ್ಯಗಳನ್ನು ಅನುಸರಿಸೋಣ : ಶ್ರೀವತ್ಸ

ಡಾ. ರಾಜ್ ಕುಮಾರ್ ಜೀವನ ಮೌಲ್ಯಗಳನ್ನು ಅನುಸರಿಸೋಣ : ಶ್ರೀವತ್ಸ

ಮೈಸೂರು : ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ ಕಲಾವಿದ ಹಾಗೂ ಎಲ್ಲ ಸಮುದಾಯದ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜ್ ಕುಮಾರ್ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಟಿ.ಎಸ್ ಶ್ರೀವತ್ಸ ಬಣ್ಣಿಸಿದರು.

ಅರಮನೆಯ ಮುಂಭಾಗದ  ಡಾ. ರಾಜ್ ಕುಮಾರ್ ಉದ್ಯಾನವನದಲ್ಲಿ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು  ಉದ್ಘಾಟಿಸಿ ನಂತರ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಿ ಮಾತನಾಡಿದರು.

ತಮ್ಮ ನಟನೆಯ ಮೂಲಕ ಮನೆ ಮಾತಾಗಿ, ಕೋಟ್ಯಾಂತರ ಅಭಿಮಾನಿ ದೇವರ ಹೃದಯದಲ್ಲಿ ಡಾ. ರಾಜ್ ಕುಮಾರ್ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ. ಅವರ ವೃತ್ತಿ ಬದುಕು ನಮಗೆಲ್ಲರಿಗೂ ಮಾದರಿಯಾಗುವಂತಹದ್ದು. ಅವರ ಜೀವನದ ಆದರ್ಶಗಳನ್ನು ತಿಳಿದು ನಮ್ಮ ಜೀವನದಲ್ಲೂ ಅನುಕರಣೆ ಮಾಡಿಕೊಳ್ಳಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಡಾ ಮಾಜಿ  ಸದಸ್ಯರಾದ ಲಕ್ಷ್ಮೀದೇವಿ, ಬಿಜೆಪಿ ಮುಖಂಡ ಜೋಗಿ ಮಂಜು, ಕೆಎಂಪಿಕೆ ಚಾರಿಟೇಬಲ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಪ್ರಭು,  ಕೀರ್ತಿ, ಕಿಶೋರ್ ಹಾಗೂ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular