Monday, April 27, 2026
Google search engine

Homeರಾಜ್ಯಸಮಯಪ್ರಜ್ಞೆ ಮೆರೆದ ಶಾಸಕಿ ನಯನಾ ಮೋಟಮ್ಮ : ಅಪಘಾತ ಪೀಡಿತರಿಗೆ ತಕ್ಷಣ ಚಿಕಿತ್ಸೆ ವ್ಯವಸ್ಥೆ

ಸಮಯಪ್ರಜ್ಞೆ ಮೆರೆದ ಶಾಸಕಿ ನಯನಾ ಮೋಟಮ್ಮ : ಅಪಘಾತ ಪೀಡಿತರಿಗೆ ತಕ್ಷಣ ಚಿಕಿತ್ಸೆ ವ್ಯವಸ್ಥೆ

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಅವರು ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ್ದಾರೆ.

ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ರಕ್ತಸ್ರಾವಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಇದೇ ವೇಳೆ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಶಾಸಕಿ ನಯನಾ ಮೋಟಮ ಅಪಘಾತ ಕಂಡು ಕೂಡಲೇ ವಾಹನ ನಿಲ್ಲಿಸಿ, ಒಂದು ಕ್ಷಣವೂ ತಡಮಾಡದೆ ತಮ್ಮ ಅಂಗರಕ್ಷಕರ ಸಹಾಯದಿಂದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಕೂರಿಸಿಕೊಂಡು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಶಾಸಕಿ ತೋರಿದ ಸಮಯಪ್ರಜ್ಞೆ ಮತ್ತು ಮಾನವೀಯ ಗುಣಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

RELATED ARTICLES
- Advertisment -
Google search engine

Most Popular