Tuesday, April 28, 2026
Google search engine

Homeಅಪರಾಧಕಾನೂನುವಿನಯ್ ಕುಲಕರ್ಣಿ ಮೇಲ್ಮನವಿಗೆ ಹೈಕೋರ್ಟ್ ಸಿಬಿಐಗೆ ನೋಟಿಸ್

ವಿನಯ್ ಕುಲಕರ್ಣಿ ಮೇಲ್ಮನವಿಗೆ ಹೈಕೋರ್ಟ್ ಸಿಬಿಐಗೆ ನೋಟಿಸ್

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿ, ಜೀವಾವಧಿ ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ಸಲ್ಲಿಸಿರುವ ಮೇಲ್ಮನವಿಗಳ ಸಂಬಂಧ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯದ ತೀರ್ಪು ರದ್ದುಕೋರಿ ಅಪರಾಧಿಗಳಾದ ವಿನಯ್‌ ಕುಲಕರ್ಣಿ (ಎ15) ಹಾಗೂ ಚಂದ್ರಶೇಖರ್‌ ಇಂಡಿ ಅಲಿಯಾಸ್‌ ಚಂದು ಮಾಮ (ಎ16) ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿ ಸಿಬಿಐಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ವಿಚಾರಣಾ ನ್ಯಾಯಾಲಯದ ದಾಖಲೆಗಳನ್ನು ಪಡೆದುಕೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿ ಅರ್ಜಿ ವಿಚಾರಣೆ ಮುಂದೂಡಿತು.

RELATED ARTICLES
- Advertisment -
Google search engine

Most Popular