Wednesday, April 29, 2026
Google search engine

Homeಸ್ಥಳೀಯತಿರುಪತಿ ಲಡ್ಡಿಗೆ ನಂದಿನಿ ತುಪ್ಪ 6 ತಿಂಗಳ ಒಪ್ಪಂದ : ಡಿಜಿಟಲ್ ಲಾಕ್ ಜೊತೆ ನಂದಿನಿ...

ತಿರುಪತಿ ಲಡ್ಡಿಗೆ ನಂದಿನಿ ತುಪ್ಪ 6 ತಿಂಗಳ ಒಪ್ಪಂದ : ಡಿಜಿಟಲ್ ಲಾಕ್ ಜೊತೆ ನಂದಿನಿ ತುಪ್ಪ ಸರಬರಾಜು

ಬೆಂಗಳೂರು : ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ.

ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ ಪೂರೈಕೆ ಮಾಡುತ್ತೇವೆ. ನಂದಿನಿ ತುಪ್ಪವು ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ಗ್ರಾಹಕರ ವಿಶ್ವಾಸ ಗಳಿಸಿದೆ. ಕಲಬೆರಕೆ ತಡೆಗಟ್ಟಲು ಡಿಜಿಟಲ್ ಲಾಕ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular