Thursday, April 30, 2026
Google search engine

Homeರಾಜ್ಯಬೌರಿಂಗ್ ಪ್ರಕರಣ: ಕೂಡಲೇ ಎಂಜಿನಿಯರ್ ಅಮಾನತು ಮಾಡಿ - ಸಿಎಂ ಆದೇಶ

ಬೌರಿಂಗ್ ಪ್ರಕರಣ: ಕೂಡಲೇ ಎಂಜಿನಿಯರ್ ಅಮಾನತು ಮಾಡಿ – ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು ಹಾಗೂ ಮಳೆ ಅವಾಂತರ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ನಡೆಸಿದ್ದರು. ಈ ವೇಳೆ ಸಿಎಂ ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ, ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಈ ಸಂಬಂಧ ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸಿಎಂ ಆದೇಶಿಸಿದ್ದಾರೆ.
ಏ.29 ಸುರಿದ ಮಳೆಯಿಂದ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಏನೇನು ಆಗಿದೆ? ಯಾವೆಲ್ಲ ಪರಿಹಾರ ಕಾರ್ಯಗಳು ನಡೆದಿವೆ? ತೆರವು ಕಾರ್ಯಚರಣೆ ಎಷ್ಟು ಆಗಿದೆ? ಎಂಬುದರ ಮಾಹಿತಿ ಸಂಗ್ರಹ ಮಾಡಿದ್ದಾರೆ. ಇನ್ನೂ ಏನೇನು ಪರಿಹಾರ ಕಾರ್ಯಗಳು ಕೈಗೊಳ್ಳಬೇಕು ಎಂಬ ವಿಚಾರ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಜಿಬಿಎ ಅಧಿಕಾರಿಗಳು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular