Thursday, April 30, 2026
Google search engine

Homeಅಪರಾಧಕೌಟುಂಬಿಕ ಕಲಹ : ಪತಿಯಿಂದ ಪತ್ನಿ ಹತ್ಯೆ, ಆರೋಪಿಯ ಶರಣಾಗತಿ

ಕೌಟುಂಬಿಕ ಕಲಹ : ಪತಿಯಿಂದ ಪತ್ನಿ ಹತ್ಯೆ, ಆರೋಪಿಯ ಶರಣಾಗತಿ

ಮೈಸೂರು: ಸಣ್ಣ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ಪುಷ್ಪ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ಕಾರಣದಿಂದ ಪ್ರತಿದಿನ ತಡವಾಗಿ ಮನೆಗೆ ಬರುತ್ತಿದ್ದ ಅವರು, ಇದೇ ವಿಚಾರವಾಗಿ ಪತಿ ಮಹೇಶ್ ಜೊತೆ ನಿರಂತರ ಜಗಳಕ್ಕೆ ಒಳಗಾಗುತ್ತಿದ್ದರು. ನಿನ್ನೆ ತಡರಾತ್ರಿ ಕೂಡ ಇದೇ ವಿಷಯಕ್ಕೆ ಜಗಳ ತೀವ್ರಗೊಂಡಿದೆ.

ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಹೊಡೆದಿದ್ದಾನೆ. ನೆಲಕ್ಕುರುಳಿದ ನಂತರವೂ ಅವನು ದಿಂಬಿನಿಂದ ಮುಖ ಒತ್ತಿಹಿಡಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ.

ನಂತರ ಮಹೇಶ್ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಮಾಹಿತಿ ತಿಳಿದು ನರಸಿಂಹರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

RELATED ARTICLES
- Advertisment -
Google search engine

Most Popular