ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್ ಫೋಟೋಶೂಟ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, Our universe is expanding ಎಂದು ಬರೆದುಕೊಂಡಿದ್ದರು.
2025ರ ಫೆ.16ರಂದು ಡಾಲಿ ಧನಂಜಯ್ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು. ಸದ್ಯ ಈ ಸಿಹಿ ಸುದ್ದಿಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದ್ದಾರೆ.



