Monday, May 4, 2026
Google search engine

Homeರಾಜಕೀಯಮಮತಾ ಬ್ಯಾನರ್ಜಿ ಪಕ್ಷ ಸೋತ್ರೆ ನೂರು ಜನರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ : ಪ್ರಥಮ್

ಮಮತಾ ಬ್ಯಾನರ್ಜಿ ಪಕ್ಷ ಸೋತ್ರೆ ನೂರು ಜನರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ : ಪ್ರಥಮ್

ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಈ ವೇಳೆ ಕನ್ನಡ ನಟ ಒಳ್ಳೆ ಹುಡುಗ ಪ್ರಥಮ್ ಮಮತ ಬ್ಯಾನರ್ಜಿ ಸೋಲಿಗಾಗಿ ಪ್ರಾರ್ಥನೆ ಮಾಡಿದ್ದಾರೆ.

ಇನ್ನೂ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಟ ಪ್ರಥಮ್, ನನಗೆ ಇಂತಹ ಮಕ್ಕಳಾಗಬೇಕು, ನನ್ನ ಸಿನಿಮಾ ಗೆಲ್ಲಬೇಕು ಅಂತ ಯಾವತ್ತು ಹರಕೆ ಹೊತ್ತವನಲ್ಲ, ಆದರೆ, ಪಶ್ಚಿಮ ಬಂಗಾಳದಲ್ಲಿ ಏನಾದ್ರೂ ಮಮತಾಬ್ಯಾನರ್ಜಿ ಪಕ್ಷ ಸೋತ್ರೆ ನೂರು ಜನರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸಮಾಜದಲ್ಲಿ ನನ್ನ ಗುರುತಿಗೆ ಸಿಗುವವರು ಕಷ್ಟದಲ್ಲಿದ್ದವರ ಶಕ್ತಿಮೀರಿ ಜೊತೆ ನಿಲ್ತೀನಿ ಅಂತ ಈಶ್ವರನಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

‌ಅಲ್ಲದೆ ನಾನು ರಾಜಕೀಯದಿಂದ ದೂರ, ನನ್ನ ದೇಶ ಬಾಂಗ್ಲಾ ವಲಸಿಗರಿಂದ ಮುಕ್ತರಾಗಬೇಕು! ನನ್ನ ದೇಶ ಚೆನ್ನಾಗಿರಬೇಕು. ಇದೊಂದೇ ಈಶ್ವರನಲ್ಲಿ ಬೇಡಿಕೆ. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪಕ್ಷ ಸೋಲಲಿ. ನಮ್ಮವರು ಚೆನ್ನಾಗಿರ್ಲಿ. ಖಂಡಿತಾ ಕಷ್ಟದಲ್ಲಿದ್ದವರ ಶಕ್ತಿ ಮೀರಿ ಸಹಾಯ ಮಾಡ್ತೀನಿ ಎಂದು ಬರೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular