Monday, May 4, 2026
Google search engine

Homeರಾಜಕೀಯತಮಿಳುನಾಡು ಫಲಿತಾಂಶ ಅಚ್ಚರಿ: ಡಿಕೆ ಶಿವಕುಮಾರ್

ತಮಿಳುನಾಡು ಫಲಿತಾಂಶ ಅಚ್ಚರಿ: ಡಿಕೆ ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲಿ ವಿಜಯ್ ದಳಪತಿ ನೇತೃತ್ವದ ಟಿವಿಕೆ ಭರ್ಜರಿ ಮುನ್ನಡೆ ಸಾಧಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕೇರಳ ಫಲಿತಾಂಶ ನಿರೀಕ್ಷಿತವಾಗಿತ್ತು, ಆದರೆ ತಮಿಳುನಾಡಿನಲ್ಲಿ ಇಷ್ಟೊಂದು ದೊಡ್ಡ ಬದಲಾವಣೆ ಆಗುತ್ತದೆ ಎಂದು ಊಹಿಸಲಿಲ್ಲ ಎಂದು ಹೇಳಿದರು.

ಇದೇ ವೇಳೆ ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular