Tuesday, May 5, 2026
Google search engine

Homeದೇಶಚುನಾವಣೆಯಲ್ಲಿ ಹೀನಾಯ ಸೋಲು: ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

ಚುನಾವಣೆಯಲ್ಲಿ ಹೀನಾಯ ಸೋಲು: ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

ತಿರುವನಂತಪುರ: ಏಪ್ರಿಲ್‌ನಲ್ಲಿ ನಡೆದ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶವು ನೆನ್ನೆ ಬಂದಿದ್ದು, ಎಡ ಪ್ರಜಾಸತ್ತಾತ್ಮಕ ರಂಗ (LDF) ಹೀನಾಯ ಸೋಲನ್ನ ಕಂಡಿದೆ. ಹೀಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಒಂದು ದಶಕದ ಕಾಲದ ಅವರ ಅಧಿಕಾರಾವಧಿ ಅಂತ್ಯಗೊಂಡಿದೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆಯನ್ನು ಅಂಗೀಕರಿಸಿದ್ದು, ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿಜಯನ್ ಅವರನ್ನು ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ ಎಂದು ರಾಜ್ ಭವನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ 10 ವರ್ಷಗಳಲ್ಲಿ ಸತತ ಎರಡು ಅವಧಿಗೆ ರಾಜ್ಯವನ್ನು ಮುನ್ನಡೆಸಿದ ವಿಜಯನ್, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (UDF) ಅದ್ಭುತ ಗೆಲುವು ಸಾಧಿಸಿದ ನಂತರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 140 ಸದಸ್ಯರ ವಿಧಾನಸಭೆಯಲ್ಲಿ ಯುಡಿಎಫ್ 102 ಸ್ಥಾನಗಳನ್ನು ಗೆದ್ದಿದೆ. ಆದರೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ LDF 35 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಖಾತೆ ತೆರೆದಿದೆ.

RELATED ARTICLES
- Advertisment -
Google search engine

Most Popular