Tuesday, May 5, 2026
Google search engine

Homeಸ್ಥಳೀಯಸಿಎಂ ನಾಳೆ ಮೈಸೂರು ಭೇಟಿ : ಜಯಂತಿ ಕಾರ್ಯಕ್ರಮದಲ್ಲಿ ಭಾಗಿ

ಸಿಎಂ ನಾಳೆ ಮೈಸೂರು ಭೇಟಿ : ಜಯಂತಿ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 06 ರಂದು ನಾಳೆ ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ.

ಮೇ 06 ರಂದು ಬೆಳಗ್ಗೆ 10:55 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿoದ ಮೈಸೂರಿಗೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಾಗೂ 2025-26 ನೇ ಸಾಲಿನ ಕಾಯಕಯೋಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ಮೈಸೂರಿನಲ್ಲಿ ವಾಸ್ತವ್ಯ ಮಾಡುವರು. ಮೇ 07 ರಂದು ಬೆಳಗ್ಗೆ 11:25 ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

RELATED ARTICLES
- Advertisment -
Google search engine

Most Popular