ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ಸರ್ಕಾರ ರಚನೆಗೆ ಮುಂದಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಆಯ್ಕೆಯಾಗಿದ್ದಾರೆ.
ಕೋಲ್ಕತ್ತಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಸ್ವಾ ಬಂಗಾಳ ಕನ್ವೆನ್ಸನ್ ಹಾಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಮಮತಾ ಬ್ಯಾನರ್ಜಿಯವರನ್ನು ಎರಡು ಬಾರಿ ಸೋಲಿಸಿದ ದಿಗ್ಗಜರಾದ ಸುವೇಂದು ಅಧಿಕಾರಿ ಸದ್ಯ ಬಂಗಾಳ ಬಿಜೆಪಿಯಲ್ಲಿ ಅಗ್ರಗಣ್ಯ ನಾಯಕರಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಇನ್ನು, ಅಗ್ನಿಮಿತ್ರಾ ಪೌಲ್ ಮತ್ತು ನಿಸಿತ್ ಪ್ರಾಮಾಣಿಕ್ ಅವರನ್ನು ಡಿಸಿಎಂಗಳಾಗಿ ಆಯ್ಕೆ ಮಾಡಲಾಗಿದೆ. ನಾಳೆ ( ಮೇ. 9) ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗಿದೆ.



