Sunday, May 10, 2026
Google search engine

Homeರಾಜ್ಯಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ: ಭದ್ರತಾ ವೈಫಲ್ಯ..?

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ: ಭದ್ರತಾ ವೈಫಲ್ಯ..?

ಬೆಂಗಳೂರು: ಬೆಂಗಳೂರಿನ ಹೊರವಲಯದ ರಸ್ತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಗೆ ಭೇಟಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಕನಕಪುರ ರಸ್ತೆಯಲ್ಲಿ ಕಗ್ಗಲಿಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ತೀವ್ರ ಆಕಂಕಕ್ಕೆ ಕಾರಣವಾಗಿದೆ.

ಇದೇ ಮಾರ್ಗವಾಗಿ ಪ್ರಧಾನಿ ಮೋದಿ ಸಂಚರಿಸಿದ್ದು, ಈ ವೇಳೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಭದ್ರತಾ ಲೋಪವಾಗಿರುವ ಶಂಕೆ ವ್ಯಕ್ತವಾಗಿದೆ. ಆರ್ಟ್ ಆಫ್ ಲಿವಿಂಗ್ ನಿಂದ ಪ್ರಧಾನಿ ಮೋದಿ ಹೈದರಾಬಾದ್ ಗೆ ತೆರಳಿದ್ದಾರೆ. ಇದೀಗ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಹೈದರಾಬಾದ್ ಪ್ರಯಾಣ ವಿಳಂಬವಾಗಿದೆ.

ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ.

ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಭದ್ರತೆ ಬಗ್ಗೆ ಇಂಚಿಂಚೂ ತನಿಖೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular