ನವದೆಹಲಿ : ವಿವಿಧ ಹೈಕೋರ್ಟ್ ಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ನಿರಂತರ ವಿಳಂಬ ಮಾಡುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಈ ಸಂಬಂಧ ಸ್ಪಷ್ಟ ಸಮಯದ ಮಿತಿ ನಿಗದಿಪಡಿಸುವಂತೆ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಹಲವು ಹೈಕೋರ್ಟ್ ಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ವಿಳಂಬವಾಗಿತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ , ಅರ್ಜಿ ವಿಚಾರಣೆ ವಿಳಂಬದಿಂದ ಸಮಸ್ಯೆ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಇದೆ. ಹೆಚ್ಚುತ್ತಿರುವ ಬಾಕಿ ಪ್ರಕರಣಗಳು ಮತ್ತು ಅನಿಯಮಿತ ಪಟ್ಟಿ ಮಾದರಿಗಳು ನ್ಯಾಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.



