Monday, May 11, 2026
Google search engine

Homeರಾಜ್ಯಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ

ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ

ಚಿತ್ರದುರ್ಗ: ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ನೆರವೇರಿತು.

ಕಳೆದ ಎರಡು ತಿಂಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗಿದ್ದು, ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು.

ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular