Wednesday, May 13, 2026
Google search engine

Homeಬ್ರೇಕಿಂಗ್ ನ್ಯೂಸ್ನಟ ದಿಲೀಪ್‌ ರಾಜ್‌ ಇನ್ನಿಲ್ಲ

ನಟ ದಿಲೀಪ್‌ ರಾಜ್‌ ಇನ್ನಿಲ್ಲ

ಬೆಂಗಳೂರು : ಕಿರುತೆರೆ, ಹಿರಿತೆರೆ ನಟ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಕೂಡ ದೊರಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾ ಪ್ರವೇಶಿಸಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುಗಳಿಸಿದ್ದರು.

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. ದಿಲೀಪ್‌ ರಾಜ್‌ ಕೊನೆಯದಾಗಿ ʼಲವ್‌ ಮಾಕ್ಟೇಲ್‌ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.

ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ.

RELATED ARTICLES
- Advertisment -
Google search engine

Most Popular