ಮಂಡ್ಯ: ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಮತ್ತು ಅರಿವು ಮೂಡಿಸುವುದು ಪ್ರತಿ ಬಬ್ಬ ಸರ್ಕಾರಿ ನೌಕರರ ಜವಾಬ್ದಾರಿಯಾಗಿದೆ ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನಿರಂತರವಾಗಿ ನೌಕರರು ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಹಾಗೂ ಜಿಲ್ಲೆಯ ಅಭಿವೃದ್ಧಿ ಪರವಾಗಿ ನೌಕರರು ಕಾರ್ಯನಿರ್ವಹಿಸಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ರವರು ತಿಳಿಸಿದರು.
ಇಂದು ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಹಾಗೂ ನಾಗರೀಕ ಸೇವಾ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ 18 ಸಾವಿರ ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, 16 ಸಾವಿರ ಸರ್ಕಾರಿ ನೌಕರರು ಮಂಡ್ಯ ಜಿಲ್ಲೆಯವರೇ ಆಗಿರುವುದರಿಂದ ನಿಮ್ಮ ಜಿಲ್ಲೆಯ ಅಭಿವೃದ್ಧಿಗೆ ನೀವು ಹೆಚ್ಚು ಶ್ರಮಿಸಿ ಜಿಲ್ಲೆ ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಬಹಳ ಪ್ರಾಮಾಣಿಕವಾಗಿ ಹಾಗೂ ಸಾರ್ವಜನಿಕರನ್ನು ಗೌರವದಿಂದ ಸಂಸ್ಕರಿಸಿ ಕಾರ್ಯ ನಿರ್ವಹಿಸಬೇಕು ಮತ್ತು ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಬೇಕು. ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿಗಳನ್ನು ನೀಡುವುದರ ಜೊತೆ ಜಿಲ್ಲೆಯ ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ನಮ್ಮ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿದೆ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಉದ್ಯೋಗ ಅವಕಾಶ ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ತೆರೆಯಲಾಗಿದೆ. ಹಾಗೂ ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ (ಆರೋಗ್ಯ ವಿಮೆ) 12 ಆಸ್ಪತ್ರೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಮಂಡ್ಯ ಜಿಲ್ಲಾ ಶಾಸಕರಾದ ಪಿ.ರವಿಕುಮಾರ್ ಮಾತನಾಡಿ ಸರ್ಕಾರಿ ನೌಕರರು ನಗುನಗುತ ಕೆಲಸ ಮಾಡಬೇಕು. ನಿವೇಶನ ನೀಡಲು ಸರ್ಕಾರಿ ಸ್ಥಳ ಹುಡುಕಿಕೊಡುವ ಗ್ರಾಮ ಆಡಳಿತ ಅಧಿಕಾರಿ ಮತ್ತು ಕಂದಾಯ ನಿರೀಕ್ಷಕರ ಹೆಸರನ್ನು ಒಂದು ದಾರಿಗೆ ನಾಮಕರಣ ಮಾಡಲಾಗುವುದು ಮತ್ತು ಜಿಲ್ಲೆಯ ಜನರ ಅಭಿವೃದ್ಧಿಗಾಗಿ ಗುರುಭವನಕ್ಕೆ ₹5 ಲಕ್ಷ ನೀಡಿರುವುದಾಗಿ ತಿಳಿಸಿದರು. ಸರ್ಕಾರಿ ನೌಕರರ ಭವನಕ್ಕೆ ₹1 ಕೋಟಿ ಅನುದಾನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಗಳ ಜೊತೆ ಚರ್ಚಿಸುತ್ತೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಕುಮಾರ, ಜಿ.ಪಂ.ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ. ಶಿವಾನಂದಮೂರ್ತಿ,ಉಪವಿಭಾಗಾಧಿಕಾರಿ ಶಿವಮೂರ್ತಿ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ನೌಕರ ಸಂಘದ ಜಿಲ್ಲಾಧ್ಯಕ್ಷರು ನಾಗೇಶ್, ಉಪಾಧ್ಯಕ್ಷರು ಶಂಭುಗೌಡ, ಗೌರವಾಧ್ಯಕ್ಷ ಸಿ.ಜೆ.ಶ್ರೀನಿವಾಸ್, ಪ್ರಧಾನ ಕಾರಯದರ್ಶಿ ವಿಜಯ್‌ಕುಮಾರ್, ಸಂಘದ ಆನಂದ್, ಕೆಂಪೇಗೌಡ, ಪುಟ್ಟರಾಜು, ರಮೇಶ್, ಅಂಕೇಗೌಡ, ಮಂಜುನಾಥ್ ರವರು ಉಪಸ್ಥಿತರಿದ್ದರು.



