ಕೊಡಗು: ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಕಂಜನ್ ಆನೆಯ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ.
ನಿನ್ನೆ ಆನೆಗಳಿಗೆ ಸ್ನಾನ ಮಾಡಿಸುವ ವೇಳೆ ಕಂಜನ್ ಹಾಗೂ ಮಾರ್ತಾಂಡ ಆನೆಗಳ ನಡುವೆ ಕಾದಾಟ ನಡೆದಿತ್ತು. ಈ ಸಂದರ್ಭದಲ್ಲಿ ಆನೆಗಳ ಅಡಿಗೆ ಸಿಲುಕಿದ ಚೆನ್ನೈ ಮೂಲದ ಮಹಿಳಾ ಪ್ರವಾಸಿಗರು ಸಾವನ್ನಪ್ಪಿದ್ದರು.
ಕಂಜನ್ ದಾಳಿಯಿಂದ ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಹಿಂಭಾಗ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು. ಬಳಿಕ ದುಬಾರೆ ಶಿಬಿರದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆನೆ ಕೊನೆಯುಸಿರೆಳೆದಿದೆ.



