Tuesday, May 19, 2026
Google search engine

Homeರಾಜ್ಯಸುದ್ದಿಜಾಲಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆಗಟ್ಟಲು ಕ್ರಮವಹಿಸಿ: ಸಿ ಮಲ್ಲಿಕ್

ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆಗಟ್ಟಲು ಕ್ರಮವಹಿಸಿ: ಸಿ ಮಲ್ಲಿಕ್

ಮೈಸೂರು: ಮಾದಕ ವಸ್ತುಗಳ ಸೇವನೆ ಸಮಾಜಕ್ಕೆ ಮಾರಕವಾಗಿದ್ದು, ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ NCORD ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 26 ರಂದು ಮಾದಕ‌ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದ್ದು, ಸದರಿ ಮಾಹೆಯಲ್ಲಿ ವಿವಿಧ ಇಲಾಖೆಯಿಂದ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಅರಿವು‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಧೂಮಪಾನ ಸೇವನೆಯಿಂದ ಧೂಮಪಾನ ಮಾಡುವ ವ್ಯಕ್ತಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಅವರ ಜೊತೆ 5 ರಿಂದ 6 ಗಂಟೆ ಇರುವವರ ಮೇಲು ಪರಿಣಾಮ ಬೀರುತ್ತದೆ. ಮೇ 31 ರಂದು ತಂಬಾಕು ಮುಕ್ತ ದಿನಾಚರಣೆ ಕಾರ್ಯಕ್ರಮವಿದ್ದು, ಈ ಬಾರಿ ವಿನೂತನವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಎಂದರು ‌

ಚೆಂಡು ಹೂ ಹಾಗೂ ತೊಗರಿ ಗಿಡಗಳ ಮಧ್ಯೆ ಗಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆ ಹೆಚ್ಚಿದ್ದು, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅವರು ಸ್ಥಳ ಭೇಟಿ ಮಾಡಿದ ಸಂದರ್ಭದಲ್ಲಿ ಪರಿಶೀಲನೆ ನಡೆಸುವಂತೆ ತಿಳಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಬಹಳಷ್ಟು ಖಾಸಗಿ ವ್ಯಸನ ಮುಕ್ತ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳ ಕಾರ್ಯನಿರ್ವಹಣೆಗೆ ಇರುವ ಷರತ್ತುಗಳು ಹಾಗೂ ಅವುಗಳ ಪಾಲನೆಯ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು‌ ಎಂದರು.

ಹಾಸ್ಟಲ್ ಗಳಲ್ಲಿ ಸಿ.ಸಿ.ಟಿ.ವಿ ಕ್ಯಮರಾ ಅಳವಡಿಸಿ ವಿದ್ಯಾರ್ಥಿಗಳ ಕಾರ್ಯಚಟುವಟಿಕೆಗಳ ಹಾಗೂ ಅವರ ವರ್ತನೆಯ ಬದಲಾವಣೆಗಳು ಹಾಗೂ ವಿದ್ಯಾರ್ಥಿಗಳು ಹೊರಗಿನಿಂದ ಪಾರ್ಸಲ್ ಮೂಲಕ ಖರೀದಿಸುವ ಆಹಾರ ಪದಾರ್ಥಗಳ ಬಗ್ಗೆ ನಿಗಾ ವಹಿಸಿ ಎಂದರು.

ಆರೋಗ್ಯ ಇಲಾಖೆಯ ಕೋಟ್ಪ್ ವಿಭಾಗದಿಂದ ಏಪ್ರಿಲ್ ಮಾಹೆಯಲ್ಲಿ 561 ದೂರು ದಾಖಲಿಸಿ 1,25,000/- ದಂಡ ಸಂಗ್ರಹಿಸಲಾಗಿದೆ. ಅಬಕಾರಿ‌ ಇಲಾಖೆ ವತಿಯಿಂದ ಮೈಸೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 20 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 14 ಆರೋಪಿಗಳನ್ನು ಬಂಧಿಸಿ, 58.335 ಕೆ.ಜಿ. ಗಾಂಜಾ ಹಾಗೂ 50 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯಾ ಇಲಾಖೆ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಎಸಿಪಿ ಮನೋಜ್ ಕುಮಾರ್, ಸಹಾಯಕ‌ ಔಷಧ ನಿಯಂತ್ರಕರಾದ ಆಶಾಲತಾ, ವಾಸೀಂ ಷರೀಫ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ‌ ನಿರ್ದೇಶಕಿ ನಿರ್ಮಲ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular