ಮೈಸೂರು: ಮೀನು ಹಿಡಿಯಲು ಹೋದ ಬಿಹಾರಿ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಗದ್ದಿಗೆ-ಬೋಗಾದಿ ಮುಖ್ಯರಸ್ತೆಯ ಹೆಮ್ಮನಹಳ್ಳಿಯ ಚಿಕ್ಕ ಕೆರೆಯಲ್ಲಿ ನಡೆದಿದೆ.
ನಿನ್ನೆ ಸಂಜೆ ಕೆರೆಯಲ್ಲಿ ಮೀನು ಹಿಡಿಯಲು ಮೂವರು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಬಿಹಾರ ಮೂಲದ ಓರ್ವ ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕದಳ ಸಿಬ್ಬಂದಿಯಿಂದ ತೀವ್ರ ತಪಾಸಣೆ ಕೈಗೊಂಡಿದೆ.



