ತುಮಕೂರು: ಕೊಬ್ಬರಿ ಬೆಲೆಯಲ್ಲಿ ನಿರಂತರ ಕುಸಿತ ಕಂಡುಬಂದಿರುವುದರಿಂದ ಕ್ವಿಂಟಾಲ್ ಗೆ 20 ಸಾವಿರ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇಂದು ತಿಪಟೂರು ಬಂದ್ ಗೆ ಕರೆ ನೀಡಲಾಗಿದೆ.
ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಯಾರು ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೊತೆಗೆ ವಿವಿಧ ರೈತಪರ ಸಂಘಟನೆಗಳು ತಿಪಟೂರು ಬಂದ್ ಗೆ ಕರೆ ನೀಡಿವೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ನಡೆಯಲಿದ್ದು, ತಿಪಟೂರು ನಗರದಲ್ಲಿ ರೈತರು ಮೆರವಣಿಗೆ ನಡೆಸಿ, ಬಳಿಕ ಉಪವಿಭಾಗಾಧಿಕಾರಿಗೆ ಮನವಿ ನೀಡಲಿದ್ದಾರೆ.