ಮಂಡ್ಯ: ಇಂದಿನಿಂದ ಷರತ್ತಿನೊಂದಿಗೆ ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ದೀರ್ಘಾವಧಿ ಬೆಳೆ ಬೆಳೆಯದಂತೆ ಕೆ.ಆರ್.ಎಸ್ ಅಚ್ಚುಕಟ್ಟು ವ್ಯಾಪ್ತಿಯ ರೈತರಲ್ಲಿ ಕಾವೇರಿ ನೀರಾವರಿ ನಿಗಮ ಮನವಿ ಮಾಡಿದೆ.
ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯದಂತೆ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ 15 ದಿನಗಳ ಕಾಲ ನೀರು ಹರಿಸಿ, 15 ದಿನಗಳ ಕಾಲ ನೀರು ನಿಲ್ಲಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಜಲಾಶಯದಲ್ಲಿ ನೀರಿನ ಸಂಗ್ರಹಣೆ ಕಡಿಮೆ ಹಿನ್ನೆಲೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಹಾಗೂ ಕೆರೆ-ಕಟ್ಟೆಗಳನ್ನ ತುಂಬಿಸುವ ಸಲುವಾಗಿ ನೀರು ಹರಿಸಲಾಗುತ್ತಿದ್ದು, ಅಲ್ಪಾವಧಿ ಅರೆ ಖುಷ್ಕಿ ಬೆಳೆಗಳನ್ನು ಮಾತ್ರ ಬೆಳೆಯಿರಿ, ನೀರನ್ನು ಮಿತ ಬಳಕೆಯಲ್ಲಿ ಉಪಯೋಗಿಸಿ ಎಂದಿರುವ ಅಧಿಕಾರಿಗಳು ಇತರೆ ಪ್ರಮುಖ ಬೆಳೆ ಬೆಳೆದು ಬೆಳೆ ನಷ್ಟವಾದರೆ ಇಲಾಖೆ ಜವಾಬ್ದಾರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.