ಮಂಡ್ಯ: ನಾಗಮಂಗಲ ತಾಲೂಕಿನ ಕಾಂತಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಮೀಷ ತೋರಿಸಿ ಚೆಕ್ ಪಡೆದ ಜೆಡಿಎಸ್ ಮುಖಂಡರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರು ಸದಸ್ಯರು ಎಸ್ಪಿಗೆ ದೂರು ನೀಡಿದ್ದಾರೆ.
ನಾಗಮಂಗಲ ತಾಲೂಕಿನ ಜೆಡಿಎಸ್ ಮುಖಂಡರಾದ ಕುಮಾರ್,ಅಂಬರೀಶ್ ರಮೇಶ್ ವಿರುದ್ಧ ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಕೊಡಿಸುವ ಆಮಿಷ ತೋರಿಸಿ ಕಾಂಗ್ರೆಸ್ ಬೆಂಬಲಿತರು ಖಾಲಿ ಚೆಕ್ ಅನ್ನು ನೀಡಿದ್ದರು. ಇದೀಗ ಖಾಲಿ ಚೆಕ್ ಪಡೆದವರು ಚುನಾವಣೆಯಲ್ಲಿ ತಾವು ಹೇಳಿದವರಿಗೆ ಮತ ಹಾಕುವಂತೆ ಬೆದರಿಕೆ ಹಾಕುತ್ತಿದ್ದಾರೆ. ಮಾತ್ರವಲ್ಲದೇ ನಿಮ್ಮ ಖಾಲಿ ಚೆಕ್ ಗಳ ಮೇಲೆ ಕೇಸ್ ಹಾಕುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪಂಚಾಯ್ತಿ ಅಧಿಕಾರ ಹಿಡಿಯಲು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯರು ಆರೋಪ ಮಾಡಿದ್ದಾರೆ.
