Tuesday, May 26, 2026
Google search engine

Homeಅಪರಾಧಬೀದರ್ ಪಶು ವಿವಿ 45 ಕೋಟಿ ಹಗರಣ: ಮಾಜಿ ಉಪಕುಲಪತಿ ಸೇರಿ ಆರು ಮಂದಿ ಬಂಧನ

ಬೀದರ್ ಪಶು ವಿವಿ 45 ಕೋಟಿ ಹಗರಣ: ಮಾಜಿ ಉಪಕುಲಪತಿ ಸೇರಿ ಆರು ಮಂದಿ ಬಂಧನ

ಬೀದರ್: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬೀದರ್ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಮಾಜಿ ಉಪಕುಲಪತಿ ಪ್ರೊ. ಹೆಚ್.ಡಿ. ನಾರಾಯಣಸ್ವಾಮಿ, ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್. ಸುರೇಶ್, ಮೃತ್ಯುಂಜಯ ಹಿರೇಮಠ, ಬೊಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಸೇರಿದ್ದಾರೆ.

2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಕ್ಕೂ ಅಧಿಕ ಸಾರ್ವಜನಿಕ ಹಣ ದುರುಪಯೋಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. 2021ರಲ್ಲಿ ಲೋಕಾಯುಕ್ತ ದಾಳಿ ನಡೆಸಿ ತನಿಖೆ ಆರಂಭಿಸಿತ್ತು. ಬಳಿಕ 2025ರ ಸೆಪ್ಟೆಂಬರ್ 10ರಂದು ರಾಜ್ಯದ 25ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ತನಿಖೆಯಲ್ಲಿ ಯಾವುದೇ ಸಾಮಗ್ರಿ ಖರೀದಿಸದೇ ನಕಲಿ ಬಿಲ್ ಸೃಷ್ಟಿಸಿರುವುದು ಸಾಬೀತಾಗಿದೆ. ಬೀದರ್ ಜಿಲ್ಲಾ ಸತ್ರ ನ್ಯಾಯಾಲಯದ ವಾರೆಂಟ್ ಮೇರೆಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

RELATED ARTICLES
- Advertisment -
Google search engine

Most Popular