Wednesday, May 27, 2026
Google search engine

Homeರಾಜ್ಯಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ತಿರುವು : ಸಿದ್ದರಾಮಯ್ಯ ರಾಜೀನಾಮೆಗೆ ಒಪ್ಪಿಗೆ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ತಿರುವು : ಸಿದ್ದರಾಮಯ್ಯ ರಾಜೀನಾಮೆಗೆ ಒಪ್ಪಿಗೆ?

ನವದೆಹಲಿ/ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿವಾದ ಹೊಸ ತಿರುವು ಪಡೆದುಕೊಂಡಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಸುದೀರ್ಘ ಸಭೆಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಸಮ್ಮತಿಸಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಆದರೆ, ರಾಜೀನಾಮೆ ಹಾಗೂ ಮುಂದಿನ ಮುಖ್ಯಮಂತ್ರಿ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆಗೆ ಪ್ರಮುಖ ಆಕಾಂಕ್ಷಿಯಾಗಿದ್ದು, 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ವೇಳೆ ನಡೆದಿತ್ತೆನ್ನಲಾದ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದ ಮತ್ತೆ ಚರ್ಚೆಗೆ ಬಂದಿದೆ.

ದೆಹಲಿ ಸಭೆಯಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭಾಗವಹಿಸಿದ್ದರು. 2028ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆ ಅಗತ್ಯವೆಂದು ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಿದೆಯೆಂದು ತಿಳಿದುಬಂದಿದೆ.

ಸುಮಾರು 100ಕ್ಕೂ ಹೆಚ್ಚು ಶಾಸಕರ ಬೆಂಬಲ ಪತ್ರದೊಂದಿಗೆ ದೆಹಲಿ ತೆರಳಿದ್ದ ಸಿದ್ದರಾಮಯ್ಯ, ಕೊನೆಗೆ ಹೈಕಮಾಂಡ್ ಒತ್ತಡದ ಹಿನ್ನೆಲೆ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಅವರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ.

ಪ್ರಸ್ತುತ ರಾಜಕೀಯ ಲೆಕ್ಕಾಚಾರಗಳ ಪ್ರಕಾರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಮೊದಲ ಆಯ್ಕೆಯಾಗಿದ್ದರೂ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಚಿವ ಎಂ.ಬಿ.ಪಾಟೀಲ್‌ ಅವರ ಹೆಸರುಗಳೂ ಚರ್ಚೆಯಲ್ಲಿವೆ.

ಇದರ ನಡುವೆ ದೆಹಲಿಯಿಂದ ವಾಪಸ್ ಆದ ಬಳಿಕ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಧ್ಯರಾತ್ರಿ ಮಹತ್ವದ ಸಭೆ ನಡೆಸಿರುವುದು ರಾಜಕೀಯ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರ ಗಮನ ನೆಟ್ಟಿದೆ.

RELATED ARTICLES
- Advertisment -
Google search engine

Most Popular