ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ.
ಚೌಡಮ್ಮ(೨೬), ಪ್ರೀತಮ್(೪), ರಾಮಣ್ಣ(೨) ಮೃತರು.
ಹೊಲದಲ್ಲಿನ ಬಾವಿಯೊಳಗೆ ತಾಯಿ, ಇಬ್ಬರು ಮಕ್ಕಳೊಂದಿಗೆ ಬಿದ್ದು ಸಾವನ್ನಪ್ಪಿದ್ದಾಳೆ.
ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಘಟನೆಯಿಂದ ಮ್ಯಾಗಳಪೇಟೆಯಲ್ಲಿ ಸೂತಕ ಛಾಯೆ ಆವರಿಸಿದೆ.
