ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಅವರ ಬಹುಕಾಲದ ರಾಜಕೀಯ ಕನಸು ನನಸಾಗಲಿದೆ.
ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರೊಂದಿಗೆ 10 ರಿಂದ 12 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಸಮಾರಂಭಕ್ಕೆ ಸುಮಾರು 10 ಸಾವಿರಕ್ಕೂ ಹೆಚ್ಚು ಗಣ್ಯರ ಆಸನ ವ್ಯವಸ್ಥೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.05ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ರಾಜಕೀಯ ವಲಯದ ಗಮನ ಈ ಸಮಾರಂಭದತ್ತ ನೆಟ್ಟಿದೆ.



