ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಬಿಎಸ್ ಯಡಿಯೂರಪ್ಪರಿಗೆ ಆಹ್ವಾನ ನೀಡಿದರು.
ಇದಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಡಿಕೆ ಶಿವಕುಮಾರ್ ಧನ್ಯವಾದ ಅರ್ಪಿಸಿದರು.
ಇಂದು ಸಂಜೆ 4.05 ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು 13 ಮಂದಿ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ.



