Wednesday, June 3, 2026
Google search engine

Homeರಾಜಕೀಯತಂದೆ ಐದು ವರ್ಷ ಸಿಎಂ ಆಗಬೇಕಿತ್ತು: ಯತೀಂದ್ರ ಸಿದ್ದರಾಮಯ್ಯ ಬೇಸರ

ತಂದೆ ಐದು ವರ್ಷ ಸಿಎಂ ಆಗಬೇಕಿತ್ತು: ಯತೀಂದ್ರ ಸಿದ್ದರಾಮಯ್ಯ ಬೇಸರ

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಯತೀಂದ್ರ ಸಿದ್ದರಾಮಯ್ಯ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ತಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಲ್ಲಿ ಐದು ವರ್ಷಗಳ ಅವಧಿ ಪೂರ್ಣಗೊಳಿಸದಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು.

“ತಂದೆ ಐದು ವರ್ಷ ಸಿಎಂ ಆಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವು. ಆ ಅವಕಾಶ ಸಿಗದಿರುವುದು ದುಃಖದ ಸಂಗತಿ” ಎಂದು ಹೇಳಿದರು. ಜೊತೆಗೆ, “ತಂದೆಯವರ ಸ್ಥಾನವನ್ನು ತುಂಬುವ ಜವಾಬ್ದಾರಿಯಾಗಿ ನನಗೆ ಸಚಿವ ಸ್ಥಾನ ನೀಡಲಾಗಿದೆ. ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ” ಎಂದು ತಿಳಿಸಿದರು.

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಈ ಹಿಂದೆ ಹಲವು ಬಾರಿ ಹೇಳಿಕೆ ನೀಡಿದ್ದರು. ಆದರೆ ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular