Wednesday, June 3, 2026
Google search engine

Homeರಾಜಕೀಯಸಿದ್ದರಾಮಯ್ಯ ಅವಧಿ ಪೂರ್ಣವಾಗದಿದ್ದಕ್ಕೆ ಯತೀಂದ್ರ ಬೇಸರ : ತಂದೆಯ ಸ್ಥಾನ ತುಂಬಲು ಸಚಿವ ಸ್ಥಾನ :...

ಸಿದ್ದರಾಮಯ್ಯ ಅವಧಿ ಪೂರ್ಣವಾಗದಿದ್ದಕ್ಕೆ ಯತೀಂದ್ರ ಬೇಸರ : ತಂದೆಯ ಸ್ಥಾನ ತುಂಬಲು ಸಚಿವ ಸ್ಥಾನ : ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದು  ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಮಧ್ಯೆ ಸಿದ್ದರಾಮಯ್ಯ  ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಈ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ತಂದೆ ಐದು ವರ್ಷ ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತಾರೆ ಅಂದು ಕೊಂಡಿದ್ದವು. ಈ ಬಗ್ಗೆ ದುಃಖವಿದೆ ಎಂದಿದ್ದಾರೆ.

ಹಾಗೆಯೇ  ತಂದೆ ಸಿದ್ದರಾಮಯ್ಯ ಅವರ ಸ್ಥಾನ ತುಂಬಲು ನನಗೆ ಸಚಿವ ಸ್ಥಾನ ನೀಡಿದ್ದಾರೆ.  ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರೈಸುತ್ತಾರೆ ಎಂದು ಮಾಧ್ಯಮಗಳ ಮುಂದೆ  ಪದೇ ಪದೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರು. ಆದರೆ ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಸಿಎಂ ಪದತ್ಯಾಗ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular