Wednesday, June 3, 2026
Google search engine

Homeರಾಜಕೀಯಮುಖ್ಯಮಂತ್ರಿಯೊಂದಿಗೆ 13 ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕಾರ

ಮುಖ್ಯಮಂತ್ರಿಯೊಂದಿಗೆ 13 ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ಈ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಕಾರ್ಯಾರಂಭ ಮಾಡಿದೆ. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಹಾಗೂ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿಯೊಂದಿಗೆ ಒಟ್ಟು 13 ಶಾಸಕರು, ಅವರಲ್ಲಿ ಒಬ್ಬ ಎಂಎಲ್‌ಸಿ ಸೇರಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಎಂ.ಬಿ. ಪಾಟೀಲ್ ಅವರು ವಿಶ್ವಗುರು ಬಸವಣ್ಣ ಹಾಗೂ ಬಸವಾದಿ ಶರಣರ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.

ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶ್ರದ್ಧಾಪೂರ್ವಕವಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ. ರಾಜ್ಯದ ಜನತೆ ಹೊಸ ಸರ್ಕಾರದಿಂದ ಅಭಿವೃದ್ಧಿ ಹಾಗೂ ಜನಪರ ಆಡಳಿತದ ನಿರೀಕ್ಷೆ ಹೊಂದಿದ್ದಾರೆ.

RELATED ARTICLES
- Advertisment -
Google search engine

Most Popular