ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ ಶಿವಕುಮಾರ್ ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ರಾಜ್ಯ ಸರ್ಕಾರ ಜೊತೆಯಾಗಿ ಕೆಲಸ ಮಾಡೋಣ ಎಂದು ಪೋಸ್ಟ್ ಮಾಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.



