ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 11 ರಂದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.
ಜೂನ್ 11 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ಆಯೋಜಿಸಲಾಗಿದ್ದು, ಈ ಸಭೆಗೆ ಹಾಜರಾಗಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿ ನಡೆದ ನೀತಿ ಆಯೋಗದ ಸಭೆಯಲ್ಲಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಭಾಗವಹಿಸಿರಲಿಲ್ಲ. ಇದೀಗ ಈ ಬಾರಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿಕೆ ಶಿವಕುಮಾರ್ ತೆರಳುವ ಸಾಧ್ಯತೆ ಇದೆ.



