ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.
ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಮತ್ತು ಯೋಜನೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಸಕ್ರಿಯವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ.



