Friday, June 12, 2026
Google search engine

Homeಸ್ಥಳೀಯಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ವಿಜಯ್

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ :  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿರುವ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೆಹಲಿಯಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಗೆ ದೇವಸ್ಥಾನದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತ ಕೋರಿತು. ಸಿಎಂ ವಿಜಯ್ ಸಾಂಪ್ರದಾಯಿಕ ಉಡುಗೆ ತೊಟ್ಟು  ದೇವಿಯ ದರ್ಶನ ಪಡೆದರು.

ನಂತರ ಸಂಕಲ್ಪ ಮಾಡಿ ಸಿಎಂ ವಿಜಯ್  ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ  ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.  ದೇವಸ್ಥಾನದ ಸುತ್ತಮುತ್ತ ಪೊಲೀಶ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸ್ಥಳೀಯರ ಪೊಲೀಸರ ಜೊತೆ ತಮಿಳುನಾಡು ಪೊಲೀಸರೂ ಭದ್ರತೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular