Monday, June 15, 2026
Google search engine

Homeವಿದೇಶಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ : ಟ್ರಂಪ್ ಘೋಷಣೆ

ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ : ಟ್ರಂಪ್ ಘೋಷಣೆ

ವಾಷಿಂಗ್ಟನ್‌ : ಅಮೆರಿಕ ಮತ್ತು ಇರಾನ್ ನಡುವಿನ ಸುದೀರ್ಘ ಸಂಘರ್ಷಕ್ಕೆ ತೆರೆಬಿದ್ದಿದ್ದು, ಶಾಂತಿ ಒಪ್ಪಂದ ಪೂರ್ಣಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಗೆ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿ (Strait of Hormuz) ಸಂಚಾರಕ್ಕೆ ಮುಕ್ತವಾಗಿದೆ.

ಟ್ರಂಪ್ ಹೇಳಿದ್ದೇನು?

ತಮ್ಮ ‘ಟ್ರುತ್ ಸೋಶಿಯಲ್’ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡ ಟ್ರಂಪ್ “ಇರಾನ್ ಜೊತೆಗಿನ ಶಾಂತಿ ಒಪ್ಪಂದ ಈಗ ಪೂರ್ಣಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಭಾಗಿಯಾದ ಎಲ್ಲರಿಗೂ ಅಭಿನಂದನೆಗಳು.” ಹಾರ್ಮುಜ್ ಜಲಸಂಧಿಯನ್ನು ಯಾವುದೇ ತೆರಿಗೆ ಇಲ್ಲದೆ ಸಂಪೂರ್ಣವಾಗಿ ತೆರೆಯಲು ಅನುಮತಿ ನೀಡಲಾಗಿದೆ. ಅಮೆರಿಕದ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ. “ವಿಶ್ವದ ಎಲ್ಲಾ ಹಡಗುಗಳು ತಮ್ಮ ಇಂಜಿನ್ ಸ್ಟಾರ್ಟ್ ಮಾಡಲಿ, ತೈಲ ಪೂರೈಕೆ ಆರಂಭವಾಗಲಿ” ಎಂದು ಅವರು ಬರೆದುಕೊಂಡಿದ್ದಾರೆ.

ಜೂನ್ 19ಕ್ಕೆ ಅಧಿಕೃತ ಸಹಿ

ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಈ ಬಗ್ಗೆ ಮಾಹಿತಿ ನೀಡಿದ್ದು, ಜೂನ್ 19ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಅಧಿಕೃತವಾಗಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಈ ಶಾಂತಿ ಒಪ್ಪಂದದಲ್ಲಿ ಲೆಬನಾನ್ ಕೂಡ ಸೇರಿದ್ದು, ಎಲ್ಲಾ ರಂಗಗಳಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಎರಡೂ ದೇಶಗಳು ಒಪ್ಪಿಕೊಂಡಿವೆ.

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಫೆಬ್ರವರಿ 28, 2026 ರಂದು ಪ್ರಾರಂಭವಾಗಿತ್ತು.ಯುದ್ಧದ ಮೊದಲ ದಿನವೇ ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದರು, ಇದು ಉದ್ವಿಗ್ನತೆಯನ್ನು ಹೆಚ್ಚಿಸಿತ್ತು. ಏಪ್ರಿಲ್ 8, 2026 ರಂದು ಮೊದಲ ಬಾರಿಗೆ ಕದನ ವಿರಾಮಕ್ಕೆ ಸಮ್ಮತಿ ಸೂಚಿಸಲಾಗಿತ್ತು.

ಜೂನ್ ಮೊದಲ ವಾರದಲ್ಲಿ ಇರಾನ್ ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಅನ್ನು ಹೊಡೆದು ಉರುಳಿಸಿದಾಗ ಪರಿಸ್ಥಿತಿ ಮತ್ತೆ ಬಿಗಡಾಯಿಸಿತ್ತು. ಆದರೆ ಈಗ ಮಾತುಕತೆಯ ಮೂಲಕ ಶಾಂತಿ ಸ್ಥಾಪನೆಯಾಗಿದೆ. (ಏಜೆನ್ಸಿಸ್)

RELATED ARTICLES
- Advertisment -
Google search engine

Most Popular