Tuesday, June 16, 2026
Google search engine

Homeರಾಜಕೀಯ13 ದಿನಗಳ ಬಳಿಕ ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

13 ದಿನಗಳ ಬಳಿಕ ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಖಾತೆ ಹಂಚಿಕೆಯ ಬಳಿಕ ಅಸಮಾಧಾನದಿಂದ ದೂರ ಉಳಿದಿದ್ದ ಸಚಿವ ಕೃಷ್ಣಭೈರೇಗೌಡ ಅವರು ಕೊನೆಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ವಹಿಸಿಕೊಂಡಿದ್ದಾರೆ. ಖಾತೆ ಹಂಚಿಕೆಯಾದ 13 ದಿನಗಳ ಬಳಿಕ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಬಿಡಿಎ ಹಾಗೂ ಬಿಎಂಆರ್‌ಡಿಎಗಳನ್ನು ನಗರಾಭಿವೃದ್ಧಿ ಇಲಾಖೆಯೊಂದಿಗೆ ಸೇರಿಸದಿರುವುದರಿಂದ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ನಿನ್ನೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಇಂದು ಜಿಬಿಎ ಮುಖ್ಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular