Wednesday, June 24, 2026
Google search engine

Homeರಾಜ್ಯಸುದ್ದಿಜಾಲಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಟಪರಿಣಾಮಗಳನ್ನು ತಡೆಗಟ್ಟಲು ಪತ್ರ ಅಭಿಯಾನ ಹಮ್ಮಿಕೊಳ್ಳಿ - ಡಾ. ಕುಮಾರ

ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಟಪರಿಣಾಮಗಳನ್ನು ತಡೆಗಟ್ಟಲು ಪತ್ರ ಅಭಿಯಾನ ಹಮ್ಮಿಕೊಳ್ಳಿ – ಡಾ. ಕುಮಾರ

ಮಂಡ್ಯ: ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಉತ್ತಮ ಆರೋಗ್ಯವನ್ನು ಪಡೆಯುವ ಹಾಗೂ ಡ್ರಗ್ ಮುಕ್ತ ಜಿಲ್ಲೆಯಾಗಿ ಮಾಡುವ ನಿಟ್ಟಿನಲ್ಲಿ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪಪರಿಣಾಮ ಕುರಿತು ಶಾಲಾ ಮಕ್ಕಳಲ್ಲಿ ಮಾದಕವಸ್ತು ಸೇವನೆ ಮಾಡುವ ಪೋಷಕರಿಗೆ ಪತ್ರ ಅಭಿಯಾನ ಮೂಲಕ ಸಂದೇಶ ಕಳುಹಿಸುವುದರ ಮೂಲಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ಇಂದು ಜಿಲ್ಲಾ ಕಛೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ಗಾಂಜಾಂನಲ್ಲಿ ಅಪ್ರಾಪ್ತ ವಯಸ್ಸಿನ ಯುವಕರು ಮಾದಕ ವಸ್ತು ಸೇವನೆ ಮಾಡುತ್ತಿರುವ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಹಿನ್ನಲೆಯಲ್ಲಿ ಸಭೆಯನ್ನು ಆಯೋಜಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ 2 ವರ್ಷಗಳ (ಗಾಂಜಾ) ಮಾದಕ ವಸ್ತು ಸಂಬಂಧಪಟ್ಟ ಪ್ರಕರಣಗಳ ವಿವರಗಳನ್ನು ನೀಡಬೇಕು ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಅರಣ್ಯ ಪ್ರದೇಶಗಳು ಹಾಗೂ ಕೃಷಿ ಭೂಮಿಗಳಲ್ಲಿ ಗಾಂಜಾ ಬೀಜಗಳನ್ನು ಬೆಳೆಸುವ ಮಾಹಿತಿ ಕಂಡುಬಂದಿದ್ದು ಅಧಿಕಾರಿಗಳು ಅರಣ್ಯ ಪ್ರದೇಶಗಳನ್ನು ಭೇಟಿ ನೀಡಿ ಪರಿಶೀಲನೆ ಮಾಡಬೇಕು ಹಾಗೂ ಗಾಂಜಾ ಬೆಳೆಯುವ ಪ್ರದೇಶಗಳನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ .ಎಂ ರವರು ಮಾತನಾಡಿ ಗಾಂಜಾ ಸಂಬಂಧಿಸಿದ ಪ್ರಕರಣಗಳ ವಿವರಗಳನ್ನು ಅಧಿಕಾರಿಗಳು ನೀಡಬೇಕು ಹಾಗೂ ಮಾದಕ ವಸ್ತು ಸೇವನೆ ಮಾಡುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಲೋಕೇಶ್ ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular