Thursday, June 25, 2026
Google search engine

Homeರಾಜ್ಯಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಎಂ.ಎನ್. ಅನುಚೇತ್ ಆಯುಕ್ತರಾಗಿ ನೇಮಕ

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಎಂ.ಎನ್. ಅನುಚೇತ್ ಆಯುಕ್ತರಾಗಿ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (ಡಿಐಪಿಆರ್) ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. 2009ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅನುಚೇತ್ ಅವರು ಇದುವರೆಗೆ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಡಿಐಪಿಆರ್‌ನ ಡಿಐಜಿ ಹಾಗೂ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯಲ್ಲಿ ಇದ್ದ ಹೇಮಂತ್ ಎಂ. ನಿಂಬಾಳ್ಕರ್ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ ಈ ನೇಮಕ ನಡೆದಿದೆ. ಜೊತೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಅವರಿಗೆ ನೀಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ.

RELATED ARTICLES
- Advertisment -
Google search engine

Most Popular