ಬಾಗಲಕೋಟೆ: ಜಿಲ್ಲೆಯ ಹುನಗುಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ವಸ್ತು ದಿನದ ಅಂಗವಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹುನಗುಂದ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಾಗಲಕೋಟೆ ಜಿಲ್ಲೆ ಇವರ ಸಹಯೋಗದಲ್ಲಿ ದುಶ್ಚಟ ಮುಕ್ತ ಮತ್ತು ಸ್ವಾಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜನಜಾಗೃತಿ ಕೊಪ್ಪಳದ ಯೋಜನಾಧಿಕಾರಿ ನಾಗೇಶ್ ವೈ.ಎ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಾದಕ ವಸ್ತುಗಳ ಬಳಕೆ ಮತ್ತು ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ಮತ್ತು ಮಾದಕ ಪದಾರ್ಥಗಳ ಸೇವನೆ ನಿಯಂತ್ರಿಸುವಲ್ಲಿ ಯಾವ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಮುದುಗಲ್ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಯೋಜನಾಧಿಕಾರಿ ಸಂತೋಷ್, ಬಿ. ವೈ. ಆಲೂರ, ನಿಜೇಶ್ ಕುಮಾರ್ ಡಿ. ಸೇರಿದಂತೆ ಇತರರು ಇದ್ದರು. ಅರುಣ್ ಕುಮಾರ್ ಕಾರ್ಯಕ್ರಮ ವಂದಿಸಿದರು, ನಿಜೇಶಕುಮಾರ ನಿರೂಪಿಸಿದರು.