ನವದೆಹಲಿ : ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು 2026 ರ ಜೂನ್ 27 ರಿಂದ 28 ರವರೆಗೆ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಅವರು ಬೆಂಗಳೂರಿನಲ್ಲಿ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕೆಂಪೇಗೌಡ ಜಯಂತಿ ಉತ್ಸವದಲ್ಲಿ ಭಾಗಿ
ಜೂನ್ 27, 2026 ರಂದು ಉಪರಾಷ್ಟ್ರಪತಿಗಳು ಬೆಂಗಳೂರಿನಲ್ಲಿ ನಡೆಯಲಿರುವ ನಾಡಪ್ರಭು ಶ್ರೀ ಕೆಂಪೇಗೌಡರ 517ನೇ ಜಯಂತಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಅವರು ತಮ್ಮ ಉಪಸ್ಥಿತಿಯನ್ನು ದಾಖಲಿಸಲಿದ್ದಾರೆ.
‘ಮಾದಕ ಮುಕ್ತ ಭಾರತ’ ಸಮ್ಮೇಳನದಲ್ಲಿ ಭಾಗಿ
ಜೂನ್ 28, 2026 ರಂದು ಉಪರಾಷ್ಟ್ರಪತಿಗಳು ಬೆಂಗಳೂರಿನಲ್ಲಿ ನಡೆಯಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಮಾದಕ ಮುಕ್ತ ಭಾರತ ಸಮ್ಮೇಳನ’ದಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ. ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ಅಂತರರಾಷ್ಟ್ರೀಯ ದಿನದ ಅಂಗವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.



