Monday, June 29, 2026
Google search engine

Homeಸ್ಥಳೀಯತಮಿಳುನಾಡಿಗೆ ನೀರು : ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ತಮಿಳುನಾಡಿಗೆ ನೀರು : ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ ಮಾಡಿದೆ. ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಎಕ್ಸ್‌ನಲ್ಲಿ ಅವರು, ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿ ಬರದ ಭೀತಿ ಎದುರಾಗಿದ್ದು, ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಜನ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ KRS ಡ್ಯಾಂನಿಂದ ಕಳೆದ ಮೂರು ದಿನಗಳಿಂದ ಪ್ರತಿದಿನ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಧಿಕಾರದಲ್ಲಿಲ್ಲದಾಗ “ನಮ್ಮ ನೀರು ನಮ್ಮ ಹಕ್ಕು” ಎಂದು ಹೇಳಿದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ತಮಿಳುನಾಡಿನ ಎದುರು ಶರಣಾಗಿದೆ ಎಂದು ಅವರು ಟೀಕಿಸಿದ್ದಾರೆ. ರಾಜಕೀಯ ಮೈತ್ರಿ ಮತ್ತು ಅಧಿಕಾರದ ಆಸೆಗಾಗಿ ಕನ್ನಡಿಗರ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆ ಎಂದೂ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ ಅವರು, ಮೇಕೆದಾಟು ಪಾದಯಾತ್ರೆ ನಡೆಸಿದಂತೆ ಈಗ ಯಾವ ಯಾತ್ರೆ ಮಾಡುತ್ತೀರಿ? ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದರೆ ಅಥವಾ ಬೆಂಗಳೂರಿನ ಜನ ಟ್ಯಾಂಕರ್ ಅವಲಂಬಿತರಾದರೆ ಅದರ ಹೊಣೆ ಯಾರು ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಜನರಿಗೆ ನೀರಿನ ಭದ್ರತೆ ನೀಡಲು ವಿಫಲವಾದ ಕಾಂಗ್ರೆಸ್ ಸರ್ಕಾರಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

RELATED ARTICLES
- Advertisment -
Google search engine

Most Popular