Wednesday, July 1, 2026
Google search engine

Homeರಾಜ್ಯಗೃಹ ಜ್ಯೋತಿ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಇಂದಿನಿಂದ

ಗೃಹ ಜ್ಯೋತಿ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಇಂದಿನಿಂದ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಜುಲೈ 1ರಿಂದ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಆರಂಭವಾಗಿದೆ. ಯೋಜನೆ 2023ರ ಜುಲೈನಲ್ಲಿ ಜಾರಿಗೆ ಬಂದಿದ್ದು, ಇದೀಗ ಅರ್ಹ ಫಲಾನುಭವಿಗಳ ಮಾಹಿತಿಯನ್ನು ನವೀಕರಿಸುವ ಉದ್ದೇಶದಿಂದ ಮನೆ ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ಎಸ್ಕಾಂಗಳ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ತೆರಳಿ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ. ಈ ವೇಳೆ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಅನ್ವಯವಾಗುವಲ್ಲಿ ಬಾಡಿಗೆ ಒಪ್ಪಂದ ಪತ್ರವನ್ನು ಸಲ್ಲಿಸಬೇಕಾಗಿದೆ.

ಈ ಪರಿಶೀಲನೆ ಪ್ರಕ್ರಿಯೆಗೆ ಸ್ಥಳದಲ್ಲೇ ಮೀಟರ್ ರೀಡರ್ ಮೂಲಕ ದಾಖಲೆ ಪರಿಶೀಲನೆ ನಡೆಸುವುದು ಮಾತ್ರವೇ ಮಾನ್ಯ ವಿಧಾನವಾಗಿದ್ದು, ಗ್ರಾಹಕರು ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಮನವಿ ಮಾಡಿದೆ. ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ವ್ಯಾಪ್ತಿಯ ಎಲ್ಲ ಫಲಾನುಭವಿಗಳಿಗೂ ಈ ಪರಿಶೀಲನೆ ಅನ್ವಯವಾಗಲಿದೆ. ಸರ್ಕಾರದ ಯೋಜನೆ ನಿಜವಾದ ಅರ್ಹರಿಗೆ ತಲುಪುವ ಉದ್ದೇಶದಿಂದ ಈ ಅಭಿಯಾನ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular