ಯಳಂದೂರು : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಸೌಹಾರ್ಯಯುತ ಕ್ರಿಕೆಟ್ ಪಂದ್ಯಾವಳಿಯನ್ನು ಪಟ್ಟಣ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದೆ.
ಈ ಪಂದ್ಯಾವಳಿಯ ಯಳಂದೂರು ಸಿವಿಲ್ ನ್ಯಾಯಾಧೀಶರಾದ ಎಂ.ಆಕರ್ಷ ಉದ್ಘಾಟನೆ ಮಾಡಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ವೀರಭದ್ರನಾಯಕ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಕಾಂತರಾಜು, ವಿಶೇಷ ಆಹ್ವಾನಿತರಾಗಿ ಚಂದ್ರಹಾಸ್ ನಾಯಕ್, ಪಬ್ಲಿಕ್ ಶಾಲೆ ಉಪಪ್ರಾಂಶುಪಾಲ ನಂಜು0ಡಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ವೀರಭದ್ರಸ್ವಾಮಿ, ಬಿಆರ್‌ಟಿ ವಲಯ ಅರಣ್ಯಾಧಿಕಾರಿ ಲೋಕೇಶ್ ಮೂರ್ತಿ, ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಕ್ರಿಕೆಟ್ ತಂಡಗಳು ಭಾಗವಹಿಸಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಪಿ.ಮಹೇಶ್ ತಿಳಿಸಿದ್ದಾರೆ.