Thursday, July 2, 2026
Google search engine

Homeರಾಜ್ಯಐಎಎಸ್‌ ಅಧಿಕಾರಿಗಳ ವರ್ಗಾವಣೆ : ಪ್ರಜಾ ಸೇವಾ ಇಲಾಖೆ ಹರ್ಷ ಗುಪ್ತ ಹೆಗಲಿಗೆ

ಐಎಎಸ್‌ ಅಧಿಕಾರಿಗಳ ವರ್ಗಾವಣೆ : ಪ್ರಜಾ ಸೇವಾ ಇಲಾಖೆ ಹರ್ಷ ಗುಪ್ತ ಹೆಗಲಿಗೆ

ಬೆಂಗಳೂರು : ಕರ್ನಾಟಕ ಸರ್ಕಾರವು ಸಾಲು ಸಾಲು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದು, ಅದರಂತೆ ಇಂದು ಸಹ ಐದು ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಮುಂದುವರೆದಿದ್ದು, ಅಧಿಕಾರಿಗಳ ಮನವಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಐದು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಅದರಲ್ಲೂ ಮುಖ್ಯವಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಜಾರಿಗೆ ತಂದಿರುವ ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ.

ಹರ್ಷ ಗುಪ್ತ ಹೆಗಲಿಗೆ ಪ್ರಜಾ ಸೇವಾ ಇಲಾಖೆ

ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ನೂತನ ಆರಂಭಿಸಿರುವ ‘ಪ್ರಜಾ ಸೇವಾ ಇಲಾಖೆ’ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜೊತೆಗೆ ಅವರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ. ಇನ್ನು ಹುದ್ದೆ ನಿರೀಕ್ಷೆಯಲ್ಲಿದ್ದ ಆರ್. ರಾಗಪ್ರಿಯ ಅವರನ್ನು ಕಾರ್ಮಿಕ ಇಲಾಖೆಯ ಆಯಕ್ತರನ್ನಾಗಿ ನೇಮಿಸಲಾಗಿದೆ.

ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ಗೋಪಾಲ ಕೃಷ್ಣ ಅವರನ್ನು ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ. ಇನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಎನ್. ಮಂಜುಶ್ರೀ ಅವರಿಗೆ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.

RELATED ARTICLES
- Advertisment -
Google search engine

Most Popular